ಚಾಮರಾಜನಗರ: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರುತನಿಖೆ ನಡೆಸಲು ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾ ಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯ ಇರುವುದರಿಂದ ತನಿಖೆ ಮಾಡಬೇಕಿದೆ. ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು.
ಆದರೆ ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ನಮ್ಮ ಹೊಸ ಸರ್ಕಾರ ಬಂದಿರುವುದರಿಂದ ಮರು ತನಿಖೆಗೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.