ಬೆಂಗಳೂರು: ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಬಿಡುಗಡೆ ಮಾಡಿದರು. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,
ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಕೃಷ್ಣಭೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್ಸಿ ಹರಿಪ್ರಸಾದ್, ಸಿಎಸ್ ವಂದಿತಾ ಶರ್ಮಾ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಕೆಸ ಎಂಡಿ ಅನ್ಬುಕುಮಾರ್, ಬಿಎಂಟಿಸಿ ಎಂಡಿ ಸತ್ಯವತಿ ಉಪಸ್ಥಿತರಿದ್ದಾರೆ.