ಬೆಂಗಳೂರು: ಕೆಲ ತಿಂಗಳ ಹಿಂದೆಯಷ್ಟೇ ಬೆಂಗಳೂರಲ್ಲಿ ದಂಪತಿಗಳಿಬ್ಬರು ಗ್ಯಾಸ್ ಸೋರಿಕೆಯಿಂದ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯ ದಾರುಣ ಅಂತ್ಯವಾಗಿದೆ. ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದ ಯುವಕ ಯುವತಿ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.
ಗ್ಯಾಸ್ ಗೀಸರ್ ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ದಾರುಣ ಸಾವು ಕಂಡಿದ್ದು ಎರಡು ದಿನದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.
ಜೂನ್ ಹತ್ತನೇ ತಾರೀಖು ಸಂಜೆ ಚಿಕ್ಕಜಾಲದ ತರಬನಹಳ್ಳಿ ನಡೆದಿರುವ ಘಟನೆ ರಾತ್ರಿ 9 ಗಂಟೆ ಸುಮಾರಿಗೆ ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಬಾತ್ ರೂಮ್ ಗೆ ಸ್ನಾನಕ್ಕೆಂದು ಹೋಗಿದ್ದ ಜೋಡಿ
ಗುಂಡ್ಲುಪೇಟೆ ತಾಲೂಕು ಚಂದ್ರಶೇಖರ್,ಗೋಕಾಕ್ ತಾಲೂಕು ಸುಧಾರಾಣಿ ಮೃತ ದುರ್ದೈವಿಗಳು ಬಾತ್ ರೂಮ್ ನ ಕಿಟಕಿ ಹಾಗೂ ಬಾಗಿಲು ಸಂಪೂರ್ಣವಾಗಿ ಲಾಕ್ ಮಾಡಿ ಇಬ್ಬರು ಸ್ನಾನಕ್ಕಿಳಿದಾಗ ಕಾರ್ಬನ್ ಮೊನಾಕ್ಸೈಡ್ ಬಾತ್ ರೂಂನಲ್ಲಿ ಸೋರಿಕೆಯಾಗಿ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಬೆಳಗ್ಗೆ ಮಾಲೀಕರು ಮನೆಯಲ್ಲಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಬಾಗಿಲು ಮುರಿದು ಮೃತದೇಹಗಳನ್ನ ಆಸ್ಪತ್ರೆಗೆ ಶಿಫ್ಟ್ ತರಬನಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದ ಚಂದ್ರಶೇಖರ್.
ಮೊನ್ನೆ ಸಂಜೆ ಮನೆಗೆ ಬಂದಿದ್ದ ಸುಧಾರಾಣಿ ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದು ಇಬ್ಬರು ಮದುವೆಯಾಗಲು ತಯಾರಿ ಇದೇ ಸಂದರ್ಭದಲ್ಲಿ ಮದುವೆಗೆ ಮುಂಚೆಯೇ ಮಸಣ ಸೇರಿದ ಜೋಡಿ ಸದ್ಯ ಮೃತದೇಹಗಳನ್ನ ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.