ಬೆಂಗಳೂರು: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಹಿನ್ನೆಲೆ ಜಾಥಾಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಎಂಜಿ.ರಸ್ತೆಯ ಮಹಾತ್ಮಗಾಂಧಿ ಪ್ರತಿಮೆಯ ಬಳಿ ಕಾರ್ಯಕ್ರಮಕ್ಕೆ ಚಾಲನೆ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಲಾ- ಕಾಲೇಜು ವಿಧ್ಯಾರ್ಥಿಗಳು, NCC ವಿಧ್ಯಾರ್ಥಿಗಳು ಭಾಗಿ.
ಎಂ.ಜಿ ರಸ್ತೆ ಬಳಿಯ ಗಾಂಧಿ ಪ್ರತಿಮೆ ಬಳಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಾಥಾಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಯಾರಾದ್ರೂ ಬಾಲ ಕಾರ್ಮಿಕರು ಕಂಡರೆ ಕೆಲಸದಿಂದ ಬಿಡಿಸಿ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಜಾತಿ ವ್ಯವಸ್ಥೆ ಪದ್ಧತಿಯಿಂದಾಗಿ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಗುಲಾಮಗಿರಿ ಮನಸ್ಥಿತಿಯಿಂದ ಹೊರ ಬರಬೇಕು ಎಂದರು.