ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಇದೀಗ ವರದಿ ಬಗ್ಗೆ ಕೇಂದ್ರ ಸರ್ಕಾರವೂ ಉತ್ತರ ನೀಡಿದೆ. ಈಗ ಅದಕ್ಕೆ ಕರ್ನಾಟಕ ಸರ್ಕಾರ ಮರು ಉತ್ತರ ಕೊಡಬೇಕಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆಗ್ರಹಿಸಿದ್ದಾರೆ.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಲಿಂಗಾಯತ ಧರ್ಮ ವಿಚಾರದಲ್ಲಿ ಏನೆಲ್ಲ ನಡೆದಿದೆ ಗೊತ್ತು. ಹೆಚ್.ಡಿ ಕುಮಾರಸ್ವಾಮಿ ಲಿಂಗಾಯತ ಧರ್ಮದ ಫೈಲ್ ಮುಟ್ಟಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು ಎಂದು ಕಿಡಿಕಾರಿದ್ದಾರೆ.
ಬಿಎಸ್ ಯಡಿಯೂರಪ್ಪ ಸಹ ಲಿಂಗಾಯತ ವಿರೋಧಿಗಳಂತೆ ನಡೆದುಕೊಂಡರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಏನೆಲ್ಲ ಮಾಡಿದ್ರು ಅಂತಾ ಗೊತ್ತಿದೆ. ಲಿಂಗಾಯತ ಧರ್ಮದ ವಿಚಾರವಾಗಿ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣದಲ್ಲಿ ಹಲವು ಹೋರಾಟಗಳು ನಡೆದಿವೆ ಎಂದರು.