ಭೋಪಾಲ್: ಮೇಕೆಯೊಂದಿಗೆ (Goat) ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ ಪ್ರಕರಣ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ. ಸೆಹೋರ್ನ ಭೇರುಂಡ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಕಂಠ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಮೇಕೆಯ ಮಾಲೀಕ ನೀಡಿದ ದೂರಿನ ಅನ್ವಯ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಕೆಗಳನ್ನು ಮೇಯಿಸುತ್ತಿದ್ದಾಗ ಅದರಲ್ಲಿ ಒಂದು ಮೇಕೆ ನಾಪತ್ತೆಯಾಗಿತ್ತು. ಸ್ವಲ್ಪ ದೂರದಲ್ಲಿ ಮೇಕೆಯ ಕೂಗು ಕೇಳಿಸಿದ್ದು, ಆರೋಪಿಗಳು ಅದರೊಂದಿಗೆ ಅಸ್ವಾಭಾವಿಕ ಕೃತ್ಯ ಎಸಗುತ್ತಿರುವುದನ್ನು ನೋಡಿದ್ದಾಗಿ ದೂರು ನೀಡಿರುವ ಮೇಕೆಯ ಮಾಲೀಕ ತಿಳಿಸಿದ್ದಾರೆ.