ಕೋಲಾರ:- ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರವನ್ನು ಪಶು ಇಲಾಖೆ ಅಧಿಕಾರಿಗಳು ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಿಪಬ್ಲಿಕನ್ ಸೇನಾ ಕೋಲಾರ ಜಿಲ್ಲಾ ಸಮಿತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದ್ರು. ಇದೇ ವೇಳೆ ಕರ್ನಾಟಕ ರಿಪಬ್ಲಿಕ್ ಸೇನೆ ಜಿಲ್ಲಾಧ್ಯಕ್ಷ ಚಿಕ್ಕನಾರಾಯಣ ಮಾತನಾಡಿ ಜಿಲ್ಲೆಯ ಎಲ್ಲಾ ತಾಲೂಕಿನ ಪಶು ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಪಶು ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ಅಧಿಕಾರಿಗಳು ಮಾಡಿರುವ ಭ್ರಷ್ಟಾಚಾರದ ದಾಖಲೆಗಳನ್ನು ನೀಡಿದ್ದೇವೆ ಯಾರು ಭ್ರಷ್ಟಾಚಾರವನ್ನು ಮಾಡಿದ್ದಾರೆ ಅವರ ವಿರುದ್ದ ಕಾನೂನು ಕ್ರಮವನ್ನು ಜರುಗಿಸ ಬೇಕು ಅಲ್ಲದೆ ಲೋಕಾಯುಕ್ತ ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಹ ಸಲ್ಲಿಸಿದರು. ಮಂಜುನಾಥ್ ನವೀನ್ ಕುಮಾರ್ ನಾರಾಯಣ ಸ್ವಾಮಿ, ಅಮರೇಶ್, ಕೆ ವಿ ಶ್ರೀನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.