ಇತ್ತೀಚೆಗೆ ಟಾಲಿವುಡ್ ನಟಿ, ಮಿಲ್ಕಿ ಬ್ಯೂಟಿ ನಟಿ ತಮನ್ನಾ ಸಿನಿಮಾಗಳಿಗಿಂತ ಹೆಚ್ಚಾಗಿ ಖಾಸಗಿ ವಿಚಾರವಾಗಿಯೇ ಸದ್ದು ಮಾಡ್ತಿದ್ದಾರೆ. ಡೇಟಿಂಗ್ ಕುರಿತಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ನಟಿ ಮೊನ್ನೆಯಷ್ಟೇ ಬಾಲಿವುಡ್ ನಟ ವಿಜಯ್ ವರ್ಮಾ ಡೇಟಿಂಗ್ ವದಂತಿಯನ್ನು ತಳ್ಳಿ ಹಾಕಿದ್ದರು. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಈ ವಿಚಾರದ ಕುರಿತಾಗಿ ನಟಿ ತಮನ್ನಾ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ವಿಚಾರವನ್ನು ನಟಿ ತಳ್ಳಿ ಹಾಕಿದ್ದರು. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಮಾತನಾಡಲ್ಲ ಎಂದಿದ್ದರು.
ಇದೀಗ ಡೇಟಿಂಗ್ ಕುರಿತು ಮತ್ತೆ ಪ್ರತಿಕ್ರಿಯೆ ನೀಡುತ್ತಿರುವ ನಟಿ, ವಿಜಯ್ ವರ್ಮಾ ಜೊತೆ ತಾವು ಲವ್ ಮಾಡುತ್ತಿರುವ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ʻಲಸ್ಟ್ ಸ್ಟೋರಿ -2′ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಸೆಟ್ನಲ್ಲಿ ಮೊದಲು ಭೇಟಿಯಾಗಿದ್ದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿದೆ ಎಂದು ಹೇಳಿದ್ದಾರೆ. ಅದರ ಮುಂದುವರೆದ ಭಾಗವಾಗಿ ಹೊಸ ವರ್ಷಾಚರಣೆವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಪ್ರೇಮಿಗಳ ದಿನದಂದು ತಮನ್ನಾಗೆ ವಿಜಯ್ ವರ್ಮಾ ವಿಶೇಷವಾಗಿ ವಿಶ್ ಮಾಡಿದ್ದರು. ತನ್ನ ಪ್ರೇಮಿಯ ಜೊತೆಗಿನ ಫೋಟೋವನ್ನು ವಿಜಯ್ ವರ್ಮಾ ಶೇರ್ ಮಾಡಿದ್ದರು. ವಿಜಯ್ ಅವರು ಕಾಲೊಂದರ ಫೋಟೋವನ್ನು ಶೇರ್ ಮಾಡಿ ಹಾರ್ಟ್ ಇಮೋಜಿ ಇರಿಸಿದ್ದರು. ಅದು ತಮನ್ನಾ ಕಾಲು ಎಂದು ಹೇಳಲಾಗಿತ್ತು. ತಮನ್ನಾ ಧರಿಸಿದ್ದ ಶೋ ಮತ್ತು ಜರ್ಕಿನ್ ಫೋಟೋಗಳನ್ನು ಶೇರ್ ಮಾಡಿ ಇದು ಪಕ್ಕಾ ತಮನ್ನಾ ಅವರ ಕಾಲು ಎಂದಿದ್ದರು ನೆಟ್ಟಿಗರು. ವಿಜಯ್ ವರ್ಮಾ ತಮ್ಮ ಪ್ರೀತಿಯ ವಿಷಯದಲ್ಲಿ ಸ್ಪಷ್ಟವಾಗಿದ್ದರೂ, ತಮನ್ನಾ ಮಾತ್ರ ಅದನ್ನು ಹೇಳಿಕೊಳ್ಳಲು ತಯಾರು ಇರಲಿಲ್ಲ. ಇದೇ ಮೊದಲ ಬಾರಿಗೆ ಪ್ರೀತಿಯ ವಿಚಾರವನ್ನು ನಟಿ ಹಂಚಿಕೊಂಡಿದ್ದಾರೆ.