ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಅಧಿಕಾರಿಗಳ ಜೊತೆ ಸಭೆ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ ಕೆ ಶಿವಕುಮಾರ್ ಸಭೆ ನಡೆಸಿದ್ರು. ಆ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಅಷ್ಟೇ ಎಂದರು.
ವಿಧಾನಸೌಧದ ಒಳಗೆ ಸಭೆ ಮಾಡಿದ್ರೆ ತಪ್ಪು. ಖಾಸಗಿ ಹೊಟೇಲ್ ನಲ್ಲಿ ಡಿಕೆ ಶಿವಕುಮಾರ್ ಸಭೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸುರ್ಜೇವಾಲ ಬಂದಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ. ಬಿಜಪಿಯವರು ದೂರು ನೀಡಲಿ. ರಾಜಭವನದವರು ಪರಿಶೀಲನೆ ಮಾಡ್ತಾರೆ ಎಂದರು.
ದಲಿತ ಸಿಎಂ ವಿಚಾರವಾಗಿ ಮಾತನಾಡಿ, ದಲಿತ ಸಿಎಂ ವಿಚಾರದಲ್ಲಿ ನೀವು ಬಹಳ ಆಳವಾಗಿ ಹೋಗುವ ಅಗತ್ಯವಿಲ್ಲ. ನಮ್ಮ ಸಮುದಾಯಕ್ಕೆ ಧೈರ್ಯ ತುಂಬುವ ನಿಟ್ಟಿನಲ್ಲಿ ಮಾತನಾಡಿದ್ದೇನೆ ಎಂದರು.
ನಾಳೆಯೇ ಹೋಗಿ ನಾವು ಸಿಎಂ ಆಗಬೇಕು ಅಂತ ನಾವು ಕೇಳುವುದಿಲ್ಲ. ಯಾವುದು ಗೊಂದಲವಾದ ಮಾತುಗಳು ಅದರಲ್ಲಿ ಇಲ್ಲ ಎಂದು ಸಮರ್ಥಿಸಿಕೊಂಡರು.