ದೆಹಲಿ ;ಕರ್ನಾಟಕದಲ್ಲಿ ಕಾಂಗ್ರೆಸ್ ‘ಅರ್ಧ ಸುಳ್ಳಿನ’ ಸರ್ಕಾರ ನಡೆಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಸಂಬಂಧ ದೆಹಲಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಉಚಿತ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪ ಸುಳ್ಳು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದೇಶದ ಇತರ ಭಾಗಗಳಂತೆ ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯೂ 5 ಕೆಜಿ ಆಹಾರ ಧಾನ್ಯಗಳಿಗೆ ಅರ್ಹರಾಗಿದ್ದಾರೆ. ಆದ್ದರಿಂದ ಕೇಂದ್ರವು ಕರ್ನಾಟಕಕ್ಕೆ ಉಚಿತ ಆಹಾರ ಧಾನ್ಯಗಳನ್ನು ನಿರಾಕರಿಸುತ್ತಿದೆ ಎಂಬ ಅವರ ಆರೋಪ ಸುಳ್ಳು’ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಇನ್ನೂ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಐದು ಚುನಾವಣಾ ಭರವಸೆಗಳಲ್ಲಿ ‘ಅನ್ನ ಭಾಗ್ಯ’ ಯೋಜನೆಯೂ ಒಂದು. ರಾಜ್ಯದಲ್ಲಿ ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಈಗಾಗಲೇ ಐದು ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ಈಗ ಈ ಯೋಜನೆಯ ಮೂಲಕ ಕಾಂಗ್ರೆಸ್ ಉಚಿತ ಧಾನ್ಯವನ್ನು 10 ಕೆಜಿಗೆ ಹೆಚ್ಚಿಸಲು ಬಯಸಿದೆ.