ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಕಿಡಿ ಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಭಾರತೀಯ ಆಹಾರ ನಿಗಮ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ಸವಾಲು ಹಾಕಿದ್ದರು.
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು.ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು,ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ತಿಳಿ ಹೇಳಿದ್ದಾರೆ.