ಶಿವಮೊಗ್ಗ: ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ (Congress)ಉದ್ದೇಶ ಪೂರ್ವಕವಾಗಿ ಗೊಂದಲ ಉಂಟು ಮಾಡುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲಿಕ್ಕೆ ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ. ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ. ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(Yadiyurappa) ಹೇಳಿದ್ದಾರೆ.