ಗದಗ ; ಕೇಂದ್ರ ಸರ್ಕಾರದ ವಿರುದ್ಧ ವಿರುದ್ಧ ಸಚಿವ ಎಚ್ ಕೆ ಪಾಟೀಲ್ ಕಿಡಿಕಾರಿದ್ದಾರೆ. ಗದಗನಲ್ಲಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್, ರಾಜ್ಯ ಸರ್ಕಾರ ಜೂನ್ 12ರಂದು ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಭಾರತೀಯ ಆಹಾರ ನಿಗಮಕ್ಕೆ (ಎಫ್ಸಿಐ) ಪತ್ರ ಬರೆದಿತ್ತು. ಬೇಡಿಕೆಯಷ್ಟು ಅಕ್ಕಿ ಕೊಡುವುದಾಗಿ ಎಫ್ಸಿಐ ಭರವಸೆ ನೀಡಿತ್ತು. ಅಲ್ಲಿನ ಮುಖ್ಯಸ್ಥರ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮಾತನಾಡಿದ್ದರು. ಇನ್ನೇನು ಪ್ರಕ್ರಿಯೆ ಆರಂಭಿಸಬೇಕು ಎನ್ನುವಷ್ಟರಲ್ಲಿ 13ರಂದು ಪತ್ರ ಬರೆದು ಈಶಾನ್ಯ ರಾಜ್ಯ ಹೊರತುಪಡಿಸಿ, ಬೇರೆ ರಾಜ್ಯಗಳಿಗೆ ಅಕ್ಕಿ ಕೊಡಲ್ಲ ಎಂದು ತಿಳಿಸಿದೆ’ ಎಂದು ಕಿಡಿಕಾರಿದರು.
‘ನಾವೇನು ಉಚಿತವಾಗಿ ಅಕ್ಕಿ ಕೇಳಿಲ್ಲ. ನಮಗೆ ಸಾಂವಿಧಾನಿಕ ಹಕ್ಕಿದೆ. ರಾಜ್ಯದ ಸಂಪತ್ತಿನಿಂದ ಹಣ ಖರ್ಚು ಮಾಡುತ್ತೇವೆ. ಆದರೆ, ರಾಜ್ಯಗಳಿಗೆ ಕೊಡಬೇಡಿ; ಖಾಸಗಿಯವರಿಗೆ ಮಾರಾಟ ಮಾಡಿ ಅಂತಿದ್ದಾರೆ’ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.