ದಾವಣಗೆರೆ: ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದವರು ಮುಖ್ಯಮಂತ್ರಿ ಆಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಪ್ರಸನ್ನಾನಂದಪುರಿಶ್ರೀ (Prasannanandapuri Shri)ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಠದಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದವರು ಮುಖ್ಯಮಂತ್ರಿ ಆಗಲು ಶ್ರಮಿಸಬೇಕಾಗಿದೆ.
ಹಿಂದಿನ ಸರ್ಕಾರ ಎಸ್ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿದೆ. ಎಸ್ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ನಲ್ಲಿ ಸೇರಿಸಬೇಕು. ಈ ಬಗ್ಗೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆಯಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕು ಎಂದರು.