ಮೈಸೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ (Dr. Mahadevappa) ತಿಳಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡುವುದಾಗಿ ತಿಳಿಸಿತ್ತು.
ಆ ನಂತರ ಅಕ್ಕಿ ಪೂರೈಸಲ್ಲ ಎಂದು ಹೇಳಿದೆ. ಎಲ್ಲಾ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಲಾಗುತ್ತೆ. ನಾಳೆ ದೆಹಲಿಗೆ ಹೋಗ್ತಿದ್ದೇನೆ, ಪ್ರತಿಭಟನೆಯಲ್ಲಿ ಭಾಗಿಯಾಗುವುದಿಲ್ಲ. ಹೀಗಾಗಿ ನಮ್ಮ ಜಿಲ್ಲೆಯ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.