ಕೆಆರ್ ಪುರ: ಜನತಾ ರೈತ ಸಂಘದ ವತಿಯಿಂದ ಪದಾಧಿಕಾರಿಗಳಿಗೆ ಇಂದು ನೇಮಕಾತಿ ಪತ್ರ ಮತ್ತು ಗುರುತಿನ ಚೀಟಿಯನ್ನು ಗೌರವಾಧ್ಯಕ್ಷ ಮಾರುತಿ, ರಾಜ್ಯಾಧ್ಯಕ್ಷ ಆರ್.ಈರೇಗೌಡ, ಉಪಾಧ್ಯಕ್ಷ ಹಾಗು ಶ್ರೀನಿವಾಸ್ ಸುಬ್ಬು ಹಾಗು ರಾಜ್ಯ ಪದಾಧಿಕಾರಿಗಳ ವಿತರಿಸಿದರು.
ಕೆಆರ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರ ವಿತರಿಸಿದ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ಆರ್.ಈರೇಗೌಡ, ರಾಜ್ಯಮಟ್ಟದಲ್ಲಿ ಜನತಾ ರೈತ ಸಂಘವನ್ನು ಸದೃಡ ಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳ ನೇಮಕಾತಿ ಮಾಡಲಾಗಿದೆ. ರಾಜ್ಯದ ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ಮಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ನೇಮಕವಾಗಿರುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ಹಾಗು ಗುರುತಿನ ಚೀಟಿ ವಿತರಿಸಲಾಗಿದೆ, ಮುಂದಿನ ದಿನಗಳಲ್ಲಿ ಸರ್ಕಾರ ರೈತರ ಪರ ನಿಲ್ಲಬೇಕು, ರೈತರಿಗೆ ಅನುಕೂಲವಾಗುವ ಎಲ್ಲ ಯೋಜನೆಗಳನ್ನು ತರಬೇಕು ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದರು.
ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ್ ಸುಬ್ಬು ಮಾತನಾಡಿ, ರಾಜ್ಯದ ವಿವಿಧ ಭಾಗಗಳ ಜಿಲ್ಲಾಧ್ಯಕ್ಷರು, ತಾಲೂಕು ಪದಾಧಿಕಾರಿಗಳ ನೇಮಕಾತಿ ಮಾಡಲಾಗಿದೆ. ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿಗಳು ಸ್ವಾಗತಾರ್ಹ, ಮುಂದಿನ ದಿನಗಳಲ್ಲಿ ರೈತರನ್ನು ಗುರುತಿಸಿ ಅವರಿಗೂ ಉಚಿತ ಬಸ್ ಪಾಸ್ ಸೇರಿದಂತೆ ಅಗತ್ಯ ಸೌಲಭ್ಯ ಕೊಡಬೇಕು. ಜನತಾ ರೈತ ಸಂಘದ ಮಹಿಳಾ ಘಟಕ, ಯುವ ಘಟಕ ಹೀಗೆ ಮುಂದಿನ ದಿನಗಳಲ್ಲಿ ಎಲ್ಲಾ ಘಟಕಗಳಿಗೆ ಪದಾಧಿಕಾರಿಗಳ ನೇಮಕಾತಿ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕಲ್ಕೆರೆ ಮಾರುತಿ, ಯುವ ಘಟಕದ ಅಧ್ಯಕ್ಷ ಸತೀಶ್ ಗೌಡ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷರಾದ ರಾಧಾ ಚಂದ್ರಶೇಖರ್, ಮಹಿಳಾ ಘಟಕದ ಕಾರ್ಯಾಧ್ಯಕ್ಷರಾದ ಶ್ರೀಮತಿ ಉಷಾ ವಿಜಯ್ ಕುಮಾರ್, ಸಾಂಸ್ಕೃತಿಕ ಘಟಕದ ಅಧ್ಯಕ್ಷರಾದ ಕೃಪಾಕರರೆಡ್ಡಿ, ನಿರ್ದೇಶಕರಾದ ಟಿ. ಜಯಕುಮಾರ್, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಪಾಲ್ ಜಯಪ್ರಕಾಶ್, ಜಯಂತಿ, ಮೋಹನ್, ಶಿವಶಂಕರಗೌಡ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.