ಮಂಡ್ಯ ;- ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಾಟಾ ಎಕ್ಸ್ ಕಾರಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಡಿಸೈರ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರ ಪೈಕಿ ಓರ್ವನನ್ನು ನೀರಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಮತ್ತಿಬ್ಬರ ಹೆಸರು ತಿಳಿದುಬಂದಿಲ್ಲ.
ಕಾರಿನಲ್ಲಿದ್ದ ಮತ್ತೊಬ್ಬನ ಸ್ಥಿತಿಯು ಗಂಭೀರವಾಗಿದ್ದು, ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಕಾರು ಅತಿ ವೇಗವಾಗಿ ಚಲಿಸುತ್ತಿದ್ದರಿಂದ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಮುಂಬದಿ ಕಾರಿನಲ್ಲಿದ್ದವರಿಗೂ ಗಂಭೀರ ಗಾಯವಾಗಿದೆ.
ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಾವಿನ ಹೆದ್ದಾರಿಯಾಗಿ ಮಾರ್ಪಡಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.