ಗದಗ;- ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರದ ವಿರುದ್ಧ ಗದಗನಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗದಗ ನಗರದ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆದಿದ್ದು, ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರಕ್ಕೆ ದಿಕ್ಕಾರ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಎಥೆನಾಲ್ ತಯಾರಿಸಲು ಅಕ್ಕಿ ಕೊಡುವ ಕೇಂದ್ರ, ತಿನ್ನೋಕೆ ಅಕ್ಕಿ ಕೊಡ್ತಾ ಇಲ್ಲ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ ಎಸ್ ಪಾಟೀಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾರಾರರು ಆಕ್ರೋಶ ಹೊರ ಹಾಕಿದ್ದಾರೆ.