ಯೋಗ ನನ್ನನ್ನು ಉಳಿಸಿಕೊಳ್ಳಲು ಸಹಾಯ ಮಾಡಿದೆ. ಯೋಗ ಅಭ್ಯಾಸ ಮಾಡಿ ಮತ್ತು ಅದರ ಪ್ರಯೋಜನ ಕಂಡುಕೊಳ್ಳಿ ಎಂದು ಟ್ವಿಟರ್ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.
ಬದಲಾದ ಜೀವನ ಶೈಲಿಯಿಂದ ಜನರಲ್ಲಿ ಆರೋಗ್ಯದ ಸಮಸ್ಯೆಗಳು ಸಾಮಾನ್ಯವಾಗಿದೆ. ಹೀಗಾಗಿ ಆರೋಗ್ಯವನ್ನು ಉತ್ತಮವಾಗಿಸಲು ಯೋಗ ಅತಿ ಮುಖ್ಯ. ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ(International Yoga Day 2023). ಇಂದು 9ನೇ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪುರಾತನ ಕಲೆಯಾಗಿದೆ. ಪ್ರತಿವರ್ಷ ಯೊಗ ದಿನದಂದು ಯೋಗ, ಧ್ಯಾನ, ಸಭೆಗಳು, ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ