ಕೋಲಾರ: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ವಿಚಾರ ಸಂಬಂಧಿಸಿದಂತೆ ಕೋಲಾರದಲ್ಲಿ ಮಹಿಳೆಯರ ಆಕ್ರೋಶ ತಾರಕಕ್ಕೇರಿದೆ. ಹೌದು ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್ಗೆ ಬೆಂಕಿ ಹಚ್ಚಿದ ಘಟನೆ ಕೋಲಾರ ದಲ್ಲಿ (Kolar) ಇಂದು ನಡೆದಿದೆ. ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು
ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್ಗೂ ಇದೇ ಗತಿ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರು ಗೋಕುಂಟೆ ಸೊಸೈಟಿಯಲ್ಲಿ ಸಾಲ ಪಡೆದಿದ್ದರು. ಸಾಲ ವಸೂಲಿಗೆ ಸೊಸೈಟಿ ಸಿಬ್ಬಂದಿ ಜೋಸೆಫ್ ತೆರಳಿದ್ದರು. ಈ ವೇಳೆ ಸಾಲ ಕಟ್ಟೋದಿಲ್ಲ ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ ಎಂದು ಮಹಿಳೆಯರು ಹೇಳಿದ್ದಾರೆ. ಅಲ್ಲದೇ ಮಹಿಳೆಯರಿಂದ ಸಿಬ್ಬಂದಿಯ ಮೇಲೆ ಹಲ್ಲೆಯ ಯತ್ನ ಕೂಡ ನಡೆದಿದೆ.