ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಆಗಿದ್ದಕ್ಕೆ ಕಾರಣ ನಾವಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್(KJ George) ತಿಳಿಸಿದ್ದಾರೆ. ಹಿಂದಿನ ಸರ್ಕಾರವಿದ್ದಾಗ KERC ವಿದ್ಯುತ್ ದರ ಏರಿಕೆ ಮಾಡಿದೆ. ಏಪ್ರಿಲ್, ಮೇ ತಿಂಗಳಿನ ಬಿಲ್ ಕಲೆಕ್ಟ್ ಮಾಡಲು ಹೇಳಿದ್ದಾರೆ. ಒಂದೇ ಬಾರಿ 2 ತಿಂಗಳ ವಿದ್ಯುತ್ ದರ ಏರಿಕೆಯ ಬಿಲ್ ಬಂದಿದೆ.
ನಮ್ಮ ಸಾಫ್ಟ್ವೇರ್ ಹಳೆಯದು, ಹೊಸ ಸಾಫ್ಟ್ವೇರ್ ಹಾಕಬೇಕು. ಕೆಲವೆಡೆ ಮೀಟರ್ ಸಮಸ್ಯೆಯಿಂದ ವಿದ್ಯುತ್ ದರ ಹೆಚ್ಚಳ ಆಗಿದೆ. ಕೊಪ್ಪಳದಲ್ಲೂ ಅಜ್ಜಿ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದೆ. ಮೀಟರ್ ಸಮಸ್ಯೆಯಿಂದ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದೆ. ಅಜ್ಜಿ ಅಷ್ಟೊಂದು ಕರೆಂಟ್ ಬಿಲ್ ಕಟ್ಟಬೇಕಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ ನೀಡಿದರು.