ಬೆಂಗಳೂರು : ರಾಜ್ಯ ಸರ್ಕಾರ ಜುಲೈನಲ್ಲಿ ಮಂಡಿಸುವ ಬಜೆಟ್ ನಲ್ಲಿ ಹಿಂದಿನ ಸರ್ಕಾರ ಮಂಡಿಸಿದ್ದ ಬಜೆಟ್ಗೆ ಹೆಚ್ಚಿನ ಬದಲಾವಣೆ ಮಾಡದೇ ಹೊಸ ರೂಪ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಕುರಿತು ಕಳೆದ ನಾಲ್ಕೈದು ದಿನಗಳಿಂದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.
ಬಜೆಟ್ನಲ್ಲಿನ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ತೀರ್ಮಾನ ಮಾಡಲಿದ್ದಾರೆ. ಕಳೆದ ಬಾರಿಯ ಬಜೆಟ್ನಲ್ಲಿ ಹೆಚ್ಚಿನ ಬದಲಾವಣೆ ಆಗುವುದಿಲ್ಲ. ಅದಕ್ಕೆ ಹೊಸ ರೂಪ ನೀಡಲು ಮುಖ್ಯಮಂತ್ರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.