ಬೆಂಗಳೂರು ;– ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಪಿಎಲ್ ಕುಟುಂಬದ ಎಲ್ಲ ಸದಸ್ಯರಿಗೆ 10 ಕಿಲೋಗ್ರಾಂ ಅಕ್ಕಿ ನೀಡುವ ಉದ್ದೇಶದಿಂದ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯಕ್ಕೆ ಅಕ್ಕಿ ನೀಡದಿರುವ ಕೇಂದ್ರ ಕ್ರಮವನ್ನು ಟೀಕಿಸಿದರು. ಕರ್ನಾಟಕಕ್ಕೆ ಅಕ್ಕಿ ಮಾರಾಟ ನಿರಾಕರಿಸಿರುವುದು ಕೇಂದ್ರ ಸರ್ಕಾರ ಉತ್ತಮ ನಡತೆ ಅಲ್ಲ’ ಎಂದು ವಾಗ್ದಾಳಿ ನಡೆಸಿದರು.
ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಶೆಟ್ಟರ್ ಹೇಳಿದರು.
ರಾಜ್ಯಕ್ಕೆ ಫುಡ್ ಕಾರ್ಪೊರೇಷನ್ ಇಂಡಿಯಾ ಮೂಲಕ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ನೀತಿ ವಿರುದ್ಧ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.