ಬೆಂಗಳೂರು: ‘ಒಂದು ದೇಶ ಒಂದು ಕಾರ್ಡ್’ ಯೋಜನೆಯ ಭಾಗವಾಗಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇದೇ ವರ್ಷದ ಮಾರ್ಚ್ ಅಂತ್ಯದಲ್ಲಿ ಕಾಮನ್ ಮೊಬಿಲಿಟಿ ಕಾರ್ಡ್ಗಳನ್ನು ಬಿಡುಗಡೆ ಮಾಡಲಾಗಿತ್ತು. ಆದ್ರೆ ರಾಷ್ಟ್ರೀಯ ಸಾಮಾನ್ಯ ಸಾರಿಗೆ ಕಾರ್ಡ್ಗೆ (National Common Mobility Card- NCMC) ನಿರೀಕ್ಷಿತ ರೀತಿಯಲ್ಲಿ ಉತ್ತಮ ಪ್ರತಿಕ್ರಿಯೆಗಳು ಸಿಗುತ್ತಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ಖರೀದಿಸಲು BMRCL ಸ್ಮಾರ್ಟ್ ವಿಧಾನ ಪರಿಚಯಿಸಿ ಯಾವುದೋ ಕಾಲವಾಗಿದೆ. ಬಿಎಂಆರ್ಸಿಎಲ್ ವತಿಯಿಂದ ಇದುವರೆಗೆ ಮಾರಾಟವಾಗಿರುವ 8 ಲಕ್ಷ ಕಾರ್ಡ್ಗಳ ಪೈಕಿ ಕೇವಲ 4,500 ರಾಷ್ಟ್ರೀಯ ಸಾಮಾನ್ಯ ಸಂಚಾರ ಕಾರ್ಡ್ಗಳನ್ನು ಬೆಂಗಳೂರಿನಲ್ಲಿ ವಿತರಿಸಿದೆ. ವೈಟ್ಫೀಲ್ಡ್-ಕೆಆರ್ ಪುರಂ ಮೆಟ್ರೋ ಮಾರ್ಗ ಉದ್ಘಾಟನೆ ಸಂದರ್ಭದಲ್ಲಿ ಕಳೆದ ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ NCMC ಕಾರ್ಡ್ಗಳಿಗೆ ಚಾಲನೆ ಕೊಟ್ಟಿದ್ದರು.