ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಬಳಿಕ,ಬಿಜೆಪಿಯ ಮೊದಲನೇ ವಿಕೆಟ್ ಪತನಕೊಂಡಿದೆ.ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಿಸಿದ್ದಾರೆ.ರಾಜೀನಾಮೆ ಘೋಷಿಸಿ ಒಂದೇ ಗಂಟೆಯಲ್ಲೇ,ನಾನು ರಾಜೀನಾಮೆ ಸಲ್ಲಿಸಿಲ್ಲ ಎಂದು ಕಟೀಲ್ ಯೂ ಟರ್ನ್ ಹೊಡೆದಿದ್ದಾರೆ.
ಯೆಸ್,ವಿಧಾನಸಭೆ ಚುನಾವಣೆಯಲ್ಲಿ ಮೂರು ಡಿಜಿಟ್ ದಾಟದೇ ಬಿಜೆಪಿ ಹೀನಾಯ ಸೋಲು ಕಂಡಿತ್ತು.ಈ ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶ ಬಂದ ಒಂದೂವರೆ ತಿಂಗಳ ಬಳಿಕ ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.ಮೊದಲ ಭಾಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಮಾಡಲು ಮುಂದಾಗಿದ್ದು,ಇಂದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲು ರಾಜೀನಾಮೆ ಘೋಷಿಸಿದ್ದಾರೆ.ಬಳ್ಳಾರಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್,ನೈತಿಕ ಹೊಣೆ ಹೊತ್ತು ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದ್ರು.
ಇನ್ನು ರಾಜೀನಾಮೆ ವಿಚಾರದಲ್ಲಿ ನಳೀನ್ ಕುಮಾರ್ ಕಟೀಲ್ ಯೂ ಟರ್ನ್ ಹೊಡೆದಿದ್ದಾರೆ.ಇಂದು ಬೆಳಗ್ಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಘೋಷಣೆ ಮಾಡಿದ್ದರು.ತದ ಬಳಿಕ ಒಂದೇ ಗಂಟೆಯಲ್ಲೇ ನಾನು ಆ ಅರ್ಥದಲ್ಲಿ ಹೇಳಿಲ್ಲ.ಈ ಬಗ್ಗೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಅತ್ತ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲು ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ,ಇತ್ತ ಬಿಜೆಪಿ ಸಾರಥ್ಯವಹಿಸಿಕೊಳ್ಳಲು ,ಆಕಾಂಕ್ಷಿಗಳು ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಅಶ್ವತ್ ನಾರಾಯಣ್,ಯಾರಿಗೆ ಅಧಿಕಾರ ಕೊಟ್ಟರು ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ.ಇನ್ನು ಪಾರ್ಲಿಮೆಂಟ್ ಚುನಾವಣೆ ಇರೋದ್ರಿಂದ ಅಧ್ಯಕ್ಷ ಸ್ಥಾನ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದ್ದಾರೆ ಎಂದು ಆರ್.ಅಶೋಕ್ ಹೇಳಿದ್ದಾರೆ.ಅಲ್ದೇ SORRY TO SAY,I WILL NOT ANSWER THIS QUESTION ಎಂದು ಸಿ.ಟಿ.ರವಿ ಹೇಳಿದ್ದಾರೆ.
ಒಟ್ಟಾರೆ,ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ,ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲು ನಿರ್ಧಾರ ಮಾಡಿದ್ದು,ಇನ್ನೊಂದು ವಾರದಲ್ಲಿ ವಿರೋಧ ಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷನನ್ನ ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ.