ಬೀದರ್: ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಬರೆ ಎಳೆಯುವ ಕೆಲಸ ಮಾಡಿದೆ ಎಂದು ಬೀದರ್ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಸರ್ಕಾರ ಬಡವರಿಗೆ 5 ಕೆಜಿ ಅಕ್ಕಿ ಕೊಡುವ ಕೆಲಸ ಮಾಡಿದೆ. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಅಕ್ಕಿ ವಿತರಿಸುವ ಕೆಲಸ ಮಾಡಿದೆ.
ಉಚಿತವಾಗಿ 10 ಕೆಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಭರವಸೆಯಂತೆ 10 ಕೆಜಿ ಅಕ್ಕಿ ಕೊಡಲಾಗದೆ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದೂ ಕಾರ್ಯಕರ್ತರು, ರಾಷ್ಟ್ರ ಚಿಂತಕರ ಮೇಲೆ ಕೇಸ್ ಹಾಕ್ತಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಏಕೆ ಕೇಸ್ ಹಾಕಿಲ್ಲ? ಎಂದು ಕಿಡಿಕಾರಿದರು.