ಬೆಂಗಳೂರು: ಈ ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯಲು ಹೋಗಿ ಬೌಲ್ಡ್ ಆಗಿದ್ದೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ (V.Somanna) ಹೇಳಿದ್ದಾರೆ. ಬೆಂಗಳೂರಿನ (Bengaluru) ಬಿಜೆಪಿ (BJP) ಕಚೇರಿಯಲ್ಲಿ ಭಾನುವಾರ ಮಾತಾಡಿದ ಅವರು, ನಾನು ಸನ್ಯಾಸಿ ಅಲ್ಲ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇನೆ. ಪಕ್ಷ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕು. ನಾನು ಪಕ್ಷ ಹೇಳಿದ ಕೆಲಸ ಮಾಡಿದ್ದೇನೆ. ಎಂಥಹ ಸಂದರ್ಭದಲ್ಲೂ ವಿಚಲಿತನಾಗಿಲ್ಲ.
ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಇಲ್ಲದಿದ್ದರೆ ಬೇಸರ ಇಲ್ಲ ಎಂದಿದ್ದಾರೆ. ಪಕ್ಷ ಕೊಟ್ಟಿರುವ ಟಾಸ್ಕ್ಗಳನ್ನು ತಲೆ ಮೇಲೆ ಹೊತ್ತು ಮಾಡಿದ್ದೇನೆ. ಇಲ್ಲಿಯವರೆಗೂ 12 ಚುನಾವಣೆಗಳನ್ನು ನೋಡಿದ್ದೇನೆ. 7 ರಿಂದ 8 ಉಪಚುನಾವಣೆಗಳಲ್ಲಿ ಕೆಲಸ ಮಾಡುವ ಅವಕಾಶವನ್ನು ಪಕ್ಷ ಕೊಟ್ಟಿದೆ. ಆದರೆ ಕಳೆದ ಒಂದೂವರೆ ತಿಂಗಳಿಂದ ನಿರುದ್ಯೋಗಿಯಾಗಿ ಕುಳಿತಿದ್ದೇನೆ ಎಂದಿದ್ದಾರೆ.