ಹಾಂಕ್ಕಾಂಗ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದು ಬಳಿಕ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಯಿತು. ಹಾಂಗ್ಕಾಂಗ್ನಿಂದ ಲಾಸ್ ಏಂಜಲೀಸ್ಗೆ ಹೊರಟಿದ್ದ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದು, ಘಟನೆಯಲ್ಲಿ 11 ಮಂದಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಟೈರ್ ಸ್ಫೋಟದಿಂದ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಈ ಪೈಕಿ 9 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಐದು ಡೋರ್ ಎಸ್ಕೇಪ್ ಸ್ಲೈಡ್ಗಳನ್ನು ಬಳಸಿಕೊಂಡು ಪ್ರಯಾಣಿಕರು ವಿಮಾನದಿಂದ ಇಳಿದಿದ್ದಾರೆ.
ವಿಮಾನದ ಟೈರ್ಗಳು ಹೆಚ್ಚು ಬಿಸಿಯಾಗಿದ್ದ ಕಾರಣ ಸಿಡಿದಿದೆ, ವಿಮಾನದಿಂದ ಕೆಳಗಿಳಿಯುವ ವೇಳೆ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೇ ಸಮಯದಲ್ಲಿ ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.