ಬೆಂಗಳೂರು: ಮಹಾರಾಷ್ಟ್ರದ ಸಾಂಗ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಭಾಗವಹಿಸಲು ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಬಾಳಾ ಸಾಹೇಬ್ ತೋರತ್ ಅವರು ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿದರು.
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಶಾಸಕಾಂಗ ಪಕ್ಷದ ನಾಯಕ ಬಾಳಾ ಸಾಹೇಬ್ ತೋರತ್, ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಶಾಸಕರಾದ ವಿಕ್ರಂ ಸಾವಂತ್, ವಿಶ್ವಜಿತ್ ಕದಂ ಹಾಜರಿದ್ದರು.