ಬೆಂಗಳೂರು ;- ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭಾನುವಾರ ಸಂಜೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ಮಹಾರಾಷ್ಟ್ರದಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಚುನಾವಣೆ ಹಾಗೂ ಪಕ್ಷದ ಬಲದ ಕುರಿತು ಸುದೀರ್ಘ ಚರ್ಚೆ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವ ಹಿಂದೆ ಇರುವ ರಾಜ್ಯ ನಾಯಕರ ಪ್ರಯತ್ನ, ಹೋರಾಟ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಜನವಿರೋಧಿ ಅಲೆಯನ್ನು ಬಳಸಿಕೊಂಡ ವಿಧಾನದ ಕುರಿತು ಚರ್ಚಿಸಿದರು.
ಇದಾದ ಬಳಿಕ ಸಂಜೆ ಬ್ರಿಗೇಡ್ ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷ ಎಂ ಆರ್ ಜೈ ಶಂಕರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಸರ್ಕಾರಕ್ಕೆ ನಮ್ಮ ಸಹಕಾರ ಇರಲಿದೆ. ತಮ್ಮಿಂದಲೂ ಸಿಗಬೇಕಾದ ಸಹಕಾರದ ನಿರೀಕ್ಷೆಯನ್ನು ವಿವರಿಸಿದರು.