ಬೆಂಗಳೂರು ;- ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿಯಾಗಿದೆ. ಕೆಂಗೇರಿ ಉಪನಗರದ ಬಸ್ ನಿಲ್ದಾಣ ಬಳಿ ರಸ್ತೆ ದಾಟುತ್ತಿದ್ದ ವೇಳೆ ಪದ್ಮಲತ ಅವರ ಮೇಲೆ ಬಿಎಂಟಿಸಿ ಹರಿದಿತ್ತು.
ವೃದ್ಧೆಯ ಎರಡು ಕಾಲುಗಳ ಮೇಲೆ ಚಾಲಕ ಬಸ್ ಹರಿಬಿಟ್ಟಿದ್ದ. ಜೂನ್ 24ರಂದು ಸಂಜೆ 5 ಗಂಟೆಗೆ ಘಟನೆ ನಡೆದಿತ್ತು. ಅಪಘಾತ ನಡೆದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ವೃದ್ಧೆಯನ್ನು ಪೊಲೀಸರು ರವಾನಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವಿಗೀಡಾಗಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ವಿವಿಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.