ಬೆಂಗಳೂರು: ಜೂನ್ 26 ವಿಶ್ವ ಮಾದಕ ವಸ್ತು ವಿರೋಧಿ ದಿನವಾಗಿದ್ದು ಇತ್ತೀಚಿನ ವರ್ಷಗಳಲ್ಲಿ ಯುವಕರು ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಬೆಂಗಳೂರು ಪೊಲೀಸರ ತಂಡದಿಂದ ಬರೋಬ್ಬರಿ 57 ಕೋಟಿ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. 1933 ಪ್ರಕರಣ ದಾಖಲಿಸಿ 57 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ
ಭರ್ಜರಿ ಕಾರ್ಯಾಚರಣೆ ನಡೆಸಿದ ನಗರ ಪೊಲೀಸರು 3746 ಕೆಜಿ ಗಾಂಜಾ ಹಾಗೂ 167 ಕೆಜಿ ಇತರೆ ಮಾದಕವಸ್ತು ಹಾಗೂ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಆಂಧ್ರ, ಒಡಿಶಾ, ತಮಿಳುನಾಡು, ಗೋವಾ, ಆಫ್ರಿಕಾ, ಹಾಗೂ ಡಾರ್ಕ್ ವೆಬ್ ಮೂಲಕ ನಗರಕ್ಕೆ ಡ್ರಗ್ಸ್ ಸಫ್ಲೈ ಆಗುತ್ತಿದ್ದು ಬೇರೆ ಬೇರೆ ಕಡೆಗಳಿಂದ ನಗರಕ್ಕೆ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ.
ಇವರು ಯುವತಿಯರು, ಟೆಕ್ಕಿಗಳು, ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಇಂದು ಮಾದಕವಸ್ತು ಮಾರಾಟ & ಸೇವನೆ ವಿರೋಧಿ ದಿನ ಹಿನ್ನೆಲೆ ವಶಪಡಿಸಿಕೊಂಡ ಮಾದಕವಸ್ತುಗಳನ್ನು ಪೊಲೀಸರು ದಾಬಸ್ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಿದ್ದಾರೆ.