ಹುಬ್ಬಳ್ಳಿ: 5 ಕೆಜಿ ಅಕ್ಕಿ ಕೊಡಲು ಆರಂಭ ಮಾಡಿದ್ದು ಯುಪಿಎ ಸರ್ಕಾರ. ಇದು ನರೇಂದ್ರ ಮೋದಿ ಅಕ್ಕಿ ಅಲ್ಲ, ಯುಪಿಎ ಅಕ್ಕಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರವಿದ್ದಾಗ ಆಹಾರ ಭದ್ರತೆ ಕಾಯ್ದೆ ತಂದಿದ್ದೇವೆ.
ಈ ಕಾಯ್ದೆ ಮೂಲಕ ಎಲ್ಲರಿಗೂ ತಲಾ 5 ಕೆಜಿ ಅಕ್ಕಿ ನೀಡಿದ್ದೇವೆ. ರಾಜ್ಯದ ಜನರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೇವೆ. ಕೇಂದ್ರದ 5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದೇವು. ಮಾತುಕೊಟ್ಟಂತೆ ರಾಜ್ಯದ ಜನರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.