ತುಮಕೂರು: ಮಕ್ಕಳಲ್ಲಿ ದಿಢೀರನೆ ಕಾಣಿಸಿಕೊಂಡ ಕಪ್ಪು ಚುಕ್ಕೆಗಳು ಕಾಣಿಸಿಕೊಂಡ ಘಟನೆಯೊಂದು ತುಮಕೂರು ಜಿಲ್ಲೆ ತುರುವೇಕೆರೆ ಹಾಗೂ ಕೊರಟಗೆರೆಯಲ್ಲಿ ಗ್ರಾಮದಲ್ಲಿ ವರದಿಯಾಗಿದೆ. ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳಲ್ಲಿ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿವೆ. ಯಲಚೇನಹಳ್ಳಿ ಗ್ರಾಮದ 5 ಮಕ್ಕಳಲ್ಲಿ ಕಾಣಿಸಿಕೊಂಡಿವೆ.
ಮಕ್ಕಳ ಅಂಗಾಲು- ಅಂಗೈಲ್ಲಿ ಕಾಣಿಸಿಕೊಂಡಿದ್ದು, ಇದೀಗ ಇಬ್ಬರು ಶಿಕ್ಷಕರೂ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ತುರುವೇಕೆರೆ ತಾಲೂಕು ಆಸ್ಪತ್ರೆಯ ಚರ್ಮ ತಜ್ಞೆ ಡಾ.ಮಧುಮತಿ ಗ್ರಾಮಕ್ಕೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಭೇಟಿ ಮಾಡಿ ತಪಾಸಣೆ ನಡೆಸಿದರು.