ಬೆಂಗಳೂರು: ವಲಸಿಗರ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ ಹೇಳಿಕೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ನಾನು ಇದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಹೋಗಲ್ಲ. ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟಲು ಇಷ್ಟ ಪಡುವುದಿಲ್ಲ. ಯಾರು ಸರಿ ಅಂತಲೂ ನಾವು ಹೇಳುವುದಿಲ್ಲ. ಆದರೆ ಪಕ್ಷದ ವೇದಿಕೆಯಲ್ಲಿ ಏನೇ ಇದ್ದರೂ ಮಾತಾಡುತ್ತೇನೆ. ನಮ್ಮಿಂದ ಏನೂ ತಪ್ಪು ಆಗಿಲ್ಲ ಅನ್ನೋದು ಬೇಡ, ಕೆಲವು ತಪ್ಪಾಗಿದೆ. ಆ ತಪ್ಪು ಆಗದ ರೀತಿ ಮುಂದೆ ಹೋಗೋಣ ಎಂದರು.
ಆಪರೇಷನ್ ಕಮಲವೇ ಬಿಜೆಪಿಗೆ ಮುಳುವಾಯ್ತು ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರವಿಕುಮಮಾರ್, ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪಕ್ಷಕ್ಕೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ. ಎಲ್ಲರೂ ಒಟ್ಟಾಗಿ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಕಾಂಗ್ರೆಸ್ನಿಂದ ಬಂದವರಿಂದಲೇ ನಾವು ಅಧಿಕಾರ ನಡೆಸಿದ್ದು, ಹೊರಗಿನವರು, ಒಳಗಿನವರು ಎಂಬ ಭೇದ ಇಲ್ಲ ಎಂದರು. ಬಿಜೆಪಿ ಸರ್ಕಾರ ಅವಧಿಯ ಯಾವುದೇ ವಿಚಾರ ತನಿಖೆ ಮಾಡಲಿ. ಯಾವುದಕ್ಕೂ ನಾವು ಸೊಪ್ಪು ಹಾಕುವುದಿಲ್ಲ, ಎದುರಿಸುತ್ತೇವೆ. ಸರ್ಕಾರದ ತನಿಖೆಗೆ ನಾವು ಹೆದರಲ್ಲ ಎಂದರು.