ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆದ ಶಾಸಕರ ಶಿಬಿರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಕೆಲವು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡರು. ಅವರ ಜೀವನದ ಏಳು ಬೀಳುಗಳು ಹಾಗೂ ರಾಜಕೀಯದಲ್ಲಿ ನಡೆದ ಬಂದ ಹಾದಿಯನ್ನು ಸಹ ತಿಳಿಸಿಕೊಟ್ಟರು.
ಅದೇನೆಂದರೆ ತುರ್ತು ಪರಿಸ್ಥಿತಿ ಜಾರಿಯಾದಾಗ ನಾನೂ ವಿರೋಧಿಸಿದ್ದೆ. ತುರ್ತು ಪರಿಸ್ಥಿತಿಯನ್ನ ವಿರೋಧಿಸಿ ಮೈಸೂರಿನ ಸೈಯಾಜಿರಾವ್ ರಸ್ತೆಯಲ್ಲಿ ಟೇಬಲ್ ಹಾಕಿಕೊಂಡು ಭಾಷಣ ಮಾಡಿದ್ದೆ. ತುರ್ತು ಪರಿಸ್ಥಿತಿ ವಿರೋಧಿಸಿ ಹ್ಯಾಂಡ್ ಬಿಲ್ ಹಂಚಿದ್ದೆ. ಆಗ ಪೊಲೀಸರು ಒದ್ದು ಒಳಗೆ ಹಾಕಿದ್ದರು. ತುರ್ತು ಪರಿಸ್ಥಿತಿಯನ್ನ ತೀವ್ರವಾಗಿ ವಿರೋಧಿಸಿದ್ದರಿಂದ ದೇವರಾಜ ಠಾಣೆ ಪೊಲೀಸರು ಒಂದು ದಿನ ಜೈಲಿಗೆ ಹಾಕಿದ್ದರು… ಶಾಸಕರ ತರಬೇತಿ ಶಿಬಿರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಂಚಿಕೊಂಡ ಇಂಟರೆಸ್ಟಿಂಗ್ ಸಂಗತಿಗಳಿವು.
ನೆಲಮಂಗಲದ ಕ್ಷೇಮವನದಲ್ಲಿ ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಇದರೊಂದಿಗೆ ನೂತನ ಶಾಸಕರೊಂದಿಗೆ ಸಂವಾದ ಕಾರ್ಯಕ್ರಮವೂ ನಡೆಯಲಿದೆ. ಮೊದಲ ದಿನದ ಶಿಬಿರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಹಲವು ಇಂಟರೆಸ್ಟಿಂಗ್ ಸಂಗತಿಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.