ನಾಗಪುರ;– ಶೀಘ್ರದಲ್ಲೇ ಲೀಟರ್ ಗೆ 15 ರೂ. ದರದ ಎಥನಾಲ್ ಚಾಲಿತ ವಾಹನ ಪರಿಚಯಿಸಲಾಗುತ್ತದೆ ಎಂದು ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ನಾಗಪುರದಲ್ಲಿ ಮಾತನಾಡಿದ ಅವರು, ಎಥನಾಲ್ ಗೆ ಪ್ರತಿ ಲೀಟರ್ 60 ರೂಪಾಯಿ ದರ ಇದ್ದು, ಪೆಟ್ರೋಲ್ ದರ 100 ರೂಪಾಯಿ ದಾಟಿದೆ. ಎಥನಾಲ್ ಶೇಕಡ 40ರಷ್ಟು ವಿದ್ಯುತ್ ಉತ್ಪಾದನೆ ಮಾಡುವುದರಿಂದ ಪ್ರತಿ ಲೀಟರ್ ಸರಾಸರಿ ದರ 15 ರೂಪಾಯಿ ಆಗಲಿದೆ ಎಂದು ತಿಳಿಸಿದ್ದಾರೆ.
ಸಂಪೂರ್ಣವಾಗಿ ಎಥನಾಲ್ ನಿಂದ ಚಾಲನೆಯಾಗುವ ವಾಹನಗಳನ್ನು ಟಿವಿಎಸ್, ಹೀರೋ ಸ್ಕೂಟರ್, ಬಜಾಜ್ ಕಂಪನಿಗಳು ತಯಾರಿಸಲಿದ್ದು, ಶೀಘ್ರವೇ ವಾಹನಗಳು ಮಾರುಕಟ್ಟೆಗೆ ಬರಲಿವೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.