ಬೆಂಗಳೂರು ;- ರಾಜ್ಯ ಸರ್ಕಾರವು ಶಾಲಾ ಮಕ್ಕಳ ಮಣಭಾರದ ಬ್ಯಾಗ್ಗೆ ತೂಕ ಮಿತಿ ನಿಗದಿಗೊಳಿಸಿದೆ.
ವಿದ್ಯಾರ್ಥಿಗಳ ತರಗತಿಗೆ ಅನುಗುಣವಾಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಶಾಲಾ ಬ್ಯಾಗ್ಗಳ ಭಾರವನ್ನು ನಿಗದಿಪಡಿಸಿದೆ. ಹೆಚ್ಚುವರಿ ಭಾರವನ್ನು ವಿದ್ಯಾರ್ಥಿಗಳ ಬೆನ್ನಿನಿಂದ ಕೆಳಗಿಳಿಸುತ್ತಿದೆ. ಇದು ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಕೊಂಚ ನೆಮ್ಮದಿ ತಂದಿದೆ.
ಇದರಿಂದಾಗಿ ಮಕ್ಕಳ ಬೆನ್ನು ಮೂಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದರೂ ಪೋಷಕರು ಮತ್ತು ಶಿಕ್ಷಕರು ಇದರ ಬಗ್ಗೆ ಅಷ್ಟು ಗಮನ ಹರಿಸಿಲ್ಲ. ಆದರೆ ಈ ಸಮಸ್ಯೆಯ ಗಂಭೀರತೆ ಅರ್ಥ ಮಾಡಿಕೊಂಡಿರುವ ರಾಜ್ಯ ಸರ್ಕಾರ ಇದೀಗ ವಿದ್ಯಾರ್ಥಿಗಳ ಬೆನ್ನ ಮೇಲಿನ ಶಾಲಾ ಬ್ಯಾಗ್ ಭಾರವನ್ನು ಕೊಂಚ ಇಳಿಸಿದೆ.