ಬೆಂಗಳೂರು ;- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಕಾರಣಕ್ಕಾಗಿ ಜುಲೈನಲ್ಲಿ ಮಂಡಿಸುವ ಬಜೆಟ್ ಗಾತ್ರ 3.35 ಲಕ್ಷ ಕೋಟಿಗಳಷ್ಟು ಇರಲಿದೆ.
ಹಿಂದಿನ ಸರ್ಕಾರ ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿ ನಾಲ್ಕು ತಿಂಗಳ ಅವಧಿಗೆ ಲೇಖಾನುದಾನ ಪಡೆಯಲಾಗಿತ್ತು. ಆಗಸ್ಟ್1 ರಿಂದ ಅನ್ವಯವಾಗುವಂತೆ ಹೊಸದಾಗಿ ಬಜೆಟ್ ಮಂಡಿಸಬೇಕಿದ್ದು, ಜು. 7 ರಂದು ಬಜೆಟ್ ಮಂಡಿಸಲಾಗುವುದು. ಹಿಂದಿನ ಬಜೆಟ್ ಗಾತ್ರ 3.09 ಲಕ್ಷ ಕೋಟಿ ರೂ. ಇದ್ದು, ಈಗ 3.30 -3.35 ಲಕ್ಷ ಕೋಟಿ ರೂ.ಗಳಷ್ಟು ಇರಲಿದೆ ಹೇಳಿದ್ದಾರೆ.