ಬೆಂಗಳೂರು ;- ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅಪರಾಧಿ ಆಗಿದ್ದು, ಹಣ ಪಾವತಿಗೆ ವಿಫಲವಾದಲ್ಲಿ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವವರೆಗೂ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು, ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ ಬಿಟಿಎಂ ಬಡಾವಣೆಯ ಪ್ರಕಾಶ್ ಕುಮಾರ್ ಯಾರಪ್ಪ ಎಂಬವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಈ ಆದೇಶ ನೀಡಿದ್ದಾರೆ. ದೂರುದಾರರಿಗೆ ಪಾವತಿಸಬೇಕಾದ ಒಟ್ಟು ಮೊತ್ತದಲ್ಲಿ 64,95,000 ಲಕ್ಷ ರೂಪಾಯಿಗಳನ್ನು ಪಾವತಿಸಿ, 5 ಸಾವಿರ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿ ಮಾಡುವಂತೆ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.