ಬೆಂಗಳೂರು ;- ಇಲಾಖೆಯ ಎಲ್ಲ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣ ಆಗುವುದರ ಜೊತೆಗೆ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಹೇಳಿದರು.
ಮೈಸೂರಿನ ಜಿ.ಪಂ ಸಭಾಂಗಣದಲ್ಲಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯ ಎಲ್ಲ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣ ಆಗುವುದರ ಜೊತೆಗೆ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. ಕಾಗದದ ಮೇಲಿನ ಪ್ರಗತಿಯನ್ನು ಒಪ್ಪಲು ಸಾಧ್ಯವಿಲ್ಲ. ವಾಸ್ತವದ ನೆಲೆಯಲ್ಲಿ ಪ್ರಗತಿ ಆಗಬೇಕು. ಇಲ್ಲದಿದ್ದರೆ ಸಂಬಂಧಪಟ್ಟವರನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು. ಇಲಾಖೆ ಇಂಜಿನಿಯರ್ಗಳಿಗೆ ಸ್ಥಳಕ್ಕೆ ನಿರಂತರವಾಗಿ ಭೇಟಿ ನೀಡಿದರೆ ಸಮಸ್ಯೆಯ ವಾಸ್ತವದ ಸ್ಥಿತಿಗತಿ ತಿಳಿಯುತ್ತದೆ. ಪರಿಹಾರ ಕಂಡು ಹಿಡಿಯಲು ಸುಲಭವಾಗುತ್ತದೆ ಎಂದು ಸಚಿವರು ಸಲಹೆ ನೀಡಿದರು.
ಇನ್ನೂ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನೇರವಾಗಿ ನನ್ನ ಬಳಿಗೆ ಬನ್ನಿ. ಅನುಕೂಲ ಮಾಡಿ ಕೊಡೋಣ. ಆದರೆ ಈ ವಿಚಾರದಲ್ಲಿ ಮಧ್ಯವರ್ತಿಗಳು ಬೇಡ. ಏನೇ ಸಮಸ್ಯೆ ಇದ್ದರೂ ಕೂಡ ಹೇಳಿ ಎಂದು ಇಲಾಖೆ ಇಂಜಿನಿಯರ್ಗಳಿಗೆ ತಿಳಿಸಿದರು.