ಕುಣಿಗಲ್ ;– ಬಡ ಮಹಿಳೆಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರು ಮಾನವೀಯತೆ ಮೆರೆದಿದ್ದಾರೆ.
ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಆಶಾ ಎಂಬ ಮಹಿಳೆಗೆ ಕೀಲು ಡಿಸ್ ಲೊಕೆಟ್ ಆಗಿತ್ತು. ಶಸ್ತ್ರಚಿಕಿತ್ಸೆ ಮಾಡಲು 4-5 ಲಕ್ಷ ರೂ ಖರ್ಚಾಗುತಿತ್ತು. ಶಾಸಕರ ಬಳಿ ಬಂದು ಮಹಿಳೆ ನೋವು ತೋಡಿಕೊಂಡಿದ್ದಳು. ಮಹಿಳೆ ನೋವಿಗೆ ಸ್ಪಂದಿಸಿ ಶಾಸಕ ರಂಗನಾಥ್ ಅವರು, ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿಸಿದರು.
ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಆಶಾ ಕೀಲು ಆಪರೇಷನ್ ಮಾಡಿಸಿಕೊಂಡಿದ್ದರು. ಆದರೆ ಈಗ ಮತ್ತೇ ಡಿಸ್ ಲೊಕೆಟ್ ಆಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಇದನ್ನರಿತು ಈ ರೀತಿಯ ಕೀಲು ಮೂಳೆ ಸಮಸ್ಯೆ ಇದ್ದ 23 ಮಹಿಳೆಯ ಉಚಿತ ಶಸ್ತ್ರಚಿಕಿತ್ಸೆಗೆ ಶಾಸಕ ರಂಗನಾಥ್ ಅವರು ಮುಂದಾಗಿದ್ದಾರೆ.
ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿರುವ ಶಾಸಕ ರಂಗನಾಥ್ ಅವರ ಸೇವೆಗೆ ಶ್ಲಾಘನೆಗಳ ಮಹಾಪೂರವೇ ಹರಿದು ಬಂದಿದೆ.