ಉಡುಪಿ: ಉಚಿತವಾಗಿ ತಲಾ 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಕ್ಷಮೆ ಕೇಳಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಆಹಾರ ಭದ್ರತಾ ಕಾಯ್ದೆ ತಂದಿದ್ದು ಯುಪಿಎ ಸರ್ಕಾರ ಅಂತಿದ್ದಾರೆ. ಇಂತಹ ಮಾತುಗಳನ್ನು ಡಿಸಿಎಂ ಬಾಯಿಂದ ನಿರೀಕ್ಷೆ ಮಾಡಿರಲಿಲ್ಲ.
ಯುಪಿಎ ಸರ್ಕಾರ ಈ ಕಾಯ್ದೆ ಮಾಡಿದ್ದರೂ ಜಾರಿ ಮಾಡಿರಲಿಲ್ಲ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಅಕ್ಕಿ ವಿತರಣೆ ಮಾಡುತ್ತಿದೆ. ಕಾಂಗ್ರೆಸ್ಸಿಗರು ತಮ್ಮ ಹೇಳಿಕೆಯನ್ನು ಮರುಪರಿಶೀಲನೆ ಮಾಡಿಕೊಳ್ಳಲಿ ಎಂದರು. ಕೇಂದ್ರ ಸರ್ಕಾರ 549 ಲಕ್ಷ ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುತ್ತಿದೆ. ಆದರೆ ನೀವು ನಮ್ಮ ಅಕ್ಕಿ ಎಂದು ಹೇಳಿ ಅಪಹಾಸ್ಯಕ್ಕೆ ಒಳಗಾಗಬೇಡಿ ಎಂದರು.