ಹಾಸನ: ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನಲೆ ಹಾಸನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸುವ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು 2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59000 ಕೋಟಿ ರೂ. ಬೇಕಾಗುವುದು. ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.
ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆ
ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ ನಮ್ಮ ಅವಧಿಯಲ್ಲಿಯೇ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕೆಂಪೇಗೌಡರು ಒಬ್ಬ ಪ್ರಗತಿಪರವಾದ, ಜಾತ್ಯಾತೀತವಾದ ದೊರೆಯನ್ನು ಸ್ಮರಿಸುವ ದಿನವಾಗಿದೆ ಎಂದರು.