ಬೆಂಗಳೂರು: ವಿಧಾನಸೌಧದ ಸಂಪುಟ ಸಭಾಂಗಣದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ.
ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆ ಸೇರಿದಂತೆ ನಾಲ್ಕು ಯೋಜನೆಗಳ ಜಾರಿ ಸಂಬಂಧ ಗಂಭೀರ ಸಮಾಲೋಚನೆ ನಡೆಸಲಾಗುತ್ತೆ.
ಕೇಂದ್ರ ಸರ್ಕಾರದಿಂದ ಅಕ್ಕಿಕಡಿತದಿಂದ ರಾಜ್ಯ ಸರ್ಕಾರ ತುಂಬಾ ಕನ್ಫ್ಯೂಸ್ ಇರುವುದರಿಂದ ಇದಕ್ಕೆ ಪರ್ಯಾಯ ಮಾರ್ಗಗಳೇನು ಮುಂದಿನ ಯೋಜನೆಗಳೇನು ಎನ್ನುವುದರ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ