ದೆಹಲಿ: 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳಿಧರನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಸ್ಟಾರ್ ಸ್ಪೋರ್ಟ್ಸ್ ಜತೆ ಮಾತನಾಡಿದ್ದ ಮುತ್ತಯ್ಯ ಮುರಳಿಧರನ್, “2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ vs ಇಂಗ್ಲೆಂಡ್ ತಂಡಗಳನ್ನು ನೋಡಲು ಎದುರು ನೋಡುತ್ತಿದ್ದೇನೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ನೆಚ್ಚಿನ ತಂಡವಾಗಿದೆ. ಏಕೆಂದರೆ ತವರಿನಲ್ಲಿ ಹೇಗೆ ಗೆಲ್ಲಬೇಕೆಂದು ಭಾರತ ತಂಡಕ್ಕೆ ಚೆನ್ನಾಗಿ ಗೊತ್ತಿದೆ. ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಫೈನಲ್ಗೆ ಲಗ್ಗೆ ಇಟ್ಟರೆ ಪಂದ್ಯ ತುಂಬಾ ಆಸಕ್ತಿಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.
2011ರಲ್ಲಿ ಶ್ರೀಲಂಕಾ, ಬಾಂಗ್ಲಾದೇಶದ ಜೊತೆ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿತ್ತು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮುತ್ತಯ್ಯ ಮುರಳಿಧರನ್ ಕೂಡ ಆಡಿದ್ದರು. ಅತ್ಯುತ್ತಮ ಪ್ರದರ್ಶನ ತೋರಿದ್ದ ಟೀಮ್ ಇಂಡಿಯಾ ಫೈನಲ್ ಗೆದ್ದು ಎರಡನೇ ವಿಶ್ವಕಪ್ ಮುಡಿಗೇರಿಸಿಕೊಂಡಿತ್ತು.
ಉಪ ಖಂಡಗಳ ತಂಡಗಳಿಗೆ ಭಾರತದ ಪಿಚ್ಗಳು ನೆರವಾಗಬಹುದು. ಭಾರತ ಹಾಗೂ ಶ್ರೀಲಂಕಾ ತಂಡಗಳಲ್ಲಿ ಅತ್ಯುತ್ತಮ ಸ್ಪಿನ್ನರ್ಗಳಿದ್ದಾರೆ. ಅಫಘಾನಿಸ್ತಾನ ತಂಡದಲ್ಲಿ ಬ್ಯಾಟಿಂಗ್ ಲೈನ್ ಅಪ್ ಇಲ್ಲವೇ ಇಲ್ಲ, ಆದರೆ ಈ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್ಗಳಿದ್ದಾರೆ. 2011ರಲ್ಲಿ ಎರಡು ಉತ್ತಮ ತಂಡಗಳು ಫೈನಲ್ ತಲುಪಿದ್ದವು ಹಾಗೂ ಫೈನಲ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ತಂಡ ಗೆಲುವು ಸಾಧಿಸಿತ್ತು,” ಎಂದು ಇದೇ ವೇಳೆ ಉಪಸ್ಥಿತರಿದ್ದ ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.