ಬೆಂಗಳೂರು: ರಾಜ್ಯದಲ್ಲಿ ತರಕಾರಿ, ಹೋಟೆಲ್ ಊಟ, ಮದ್ಯ ಹೀಗೆ ಎಲ್ಲವೂ ಬೆಲೆ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 1ಕ್ಕೆ ಜಾರಿಯಾಗಬೇಕಿದ್ದ ಅನ್ನ ಭಾಗ್ಯ ಯೋಜನೆ ಜಾರಿಗೆ ಅಕ್ಕಿ ಸಮಸ್ಯೆ ಎದುರಾಗಿದ್ದು, ಫಲಾನುಭವಿಗಳಿಗೆ ಅಕ್ಕಿಯ ಹಣ ನೀಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ.
ಇದಕ್ಕೆ ರಾಜ್ಯದಲ್ಲಿ ಪರ ವಿರೋಧಗಳು ಶುರುವಾಗಿದೆ. ಜೊತೆಗೆ ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ಮತ್ತು ವಿಪಕ್ಷ ಬಿಜೆಪಿ (BJP) ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ.
ಆಡಳಿತಾರೂಢ ಮತ್ತು ವಿಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಕೌಂಟರ್ ನೀಡಲು ಬಿಜೆಪಿ ಮನೆ ಮನೆ ಅಭಿಯಾನವನ್ನು ಈಗಾಗಲೇ ಆರಂಭಿಸಿದೆ.