ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು.
ಕರ್ನಾಟಕ SSLC ಪೂರಕ ಫಲಿತಾಂಶ ಹೇಗೆ ಪರಿಶೀಲಿಸುವುದು
- nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ.
- ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿ.
- ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ.
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದರು.