ಟಾಲಿವುಡ್ ನಟಿ ಲಾವಣ್ಯ ತ್ರಿಪಾಠಿ ಸದ್ಯದಲ್ಲೇ ವರುಣ್ ತೇಜ್ ಅವರನ್ನು ಮದುವೆಯಾಗುವ ಮೂಲಕ ಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಸೊಸೆಯಾಗಲಿದ್ದಾರೆ. ಸದ್ಯದಲ್ಲೇ ವರುಣ್ ತೇಜ್ ಹಾಗೂ ಲಾವಣ್ಯ ಹಸೆಮಣೆ ಏರುತ್ತಿದ್ದು ಈ ಮಧ್ಯೆ ಲಾವಣ್ಯ ವಿಚಿತ್ರವಾದ ಕಾಯಿಲೆಯಿಂದ ಬಳಲುತ್ತಿರುವುದು ವರದಿಯಾಗಿದೆ. ಈ ಸುದ್ದಿ ಕೇಳಿ ನಟಿಯ ಅಭಿಮಾನಿಗಳು ಕಂಗಾಲಾಗಿದ್ದಾರೆ.
ಲಾವಣ್ಯ ಮೆಗಾ ಫ್ಯಾಮಿಲಿ ಸೊಸೆಯಾಗುತ್ತಾರೆ ಎನ್ನುವ ವಿಷಯ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಇನ್ನು ಲಾವಣ್ಯ ಹಿನ್ನೆಲೆ ಏನು? ಆಕೆಯ ಜಾತಿ ಏನು? ಆಕೆಯ ಆಸ್ತಿ ಮೌಲ್ಯ ಎಷ್ಟು ಅಂತೆಲ್ಲಾ ಅಂತರ್ಜಾಲದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಇದೇ ಸಮಯದಲ್ಲಿ ಆಕೆ ತನಗಿರುವ ವಿಚಿತ್ರ ಆರೋಗ್ಯ ಸಮಸ್ಯೆ ಬಗ್ಗೆ ಹೇಳಿದ್ದ ವೀಡಿಯೋವೊಂದು ಇದೀಗ ವೈರಲ್ ಆಗಿದೆ.
ಸ್ವತಃ ಲಾವಣ್ಯ ತ್ರಿಪಾಠಿ ತಾವು ಟ್ರಿಪೋಫೋಬಿಯಾದಿಂಧ ಬಳಲುತ್ತಿರುವ ಬಗ್ಗೆ ಮಾತನಾಡಿದ್ದರು. ಚರ್ಮದ ರಂಧ್ರಗಳು, ಜೇನುಗೂಡು, ಕಮಲದ ಕಣ್ಣುಗಳ ರಂಧ್ರಗಳ ಅಥವಾ ಉಬ್ಬುಗಳನ್ನು ಹೊಂದಿರುವ ವಸ್ತುವನ್ನು ನೋಡಲು ಆಕೆ ಪ್ರಜ್ಞಾಪೂರ್ವಕವಾಗಿ ಹೆದರುತ್ತೀನಿ. ಇದರಿಂದ ಸಾಕಷ್ಟು ಬಾರಿ ಸಮಸ್ಯೆ ಎದುರಿಸಿರುವುದಾಗಿ ಹೇಳಿಕೊಂಡಿದ್ದರು. ಇದರಿಂದ ಹೊರ ಬರಲು ಪ್ರಯತ್ನ ನಡೆಸುತ್ತಿರುವುದಾಗಿ ವಿವರಿಸಿದ್ದರು. ನಾವು ಸಂತೋಷವಾಗಿ ಇರಬೇಕು. ನಮ್ಮ ಸುತ್ತಲಿನ ಪ್ರಪಂಚದಲ್ಲಿ ಸಂತಸ ಹರಡಬೇಕು, ಇದನ್ನು ನಾನು ನಂಬುತ್ತೇನೆ ಎಂದು ಲಾವಣ್ಯ ಹೇಳಿದ್ದು ಸದ್ಯ ಈ ವೀಡಿಯೋ ವೈರಲ್ ಆಗಿದೆ.