ಬೆಂಗಳೂರು: ಆದಾಯಕ್ಕೂ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕೆ.ಆರ್. ಪುರಂ ಕುಬೇರ ತಹಶೀಲ್ದಾರ್ ಅಜಿತ್ ರೈ ಅವರನ್ನು 7 ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ನ್ಯಾಯಾಧೀಶ ರ ಮುಂದೆ ಅಧಿಕಾರಿಗಳು ಹಾಜರುಪಡಿಸಿದ್ದರು. ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾ. ವಿ.ಶ್ರೀಕಾಂತ್ ಅವರು ಈ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜುಲೈ 6 ಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚನೆ ನೀಡಿದ್ದಾರೆ.
ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್ನ ಮದ್ಯ ಪತ್ತೆಯಾಗಿತ್ತು